ರಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ನಲ್ಲಿ ಸಿಂಧು ಫೈನಲ್‌ಗೆ
18 Aug, 2016
ರಿಯೊ ಡಿ ಜನೈರೊ, ಆ.18: ಒಲಿಂಪಿಕ್ಸ್‌ನಲ್ಲಿ ಚೊಚ್ಚಲ ಪದಕ ಗೆಲ್ಲುವ ಕನಸು ಹೊತ್ತಿರುವ ಭಾರತದ ಪಿ. ವಿ ಸಿಂಧು ಫೈನಲ್ ಪ್ರವೇಶಿಸುವ ಮೂಲಕ ಬೆಳ್ಳಿ ಪದಕ ದೃಢಪಡಿಸಿದ್ದಾರೆ.ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿ ಕಂಚು ಜಯಿಸಿರುವ ಸಿಂಧು ಇಂದು ನಡೆದ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಜಪಾನ್‌ನ ನೊಜೊಮಿ ಒಕುಹರ ವಿರುದ್ಧ 21-19, 21-10 ಅಂತರದಲ್ಲಿ ಭರ್ಜರಿ ಜಯ ಗಳಿಸಿ ಫೈನಲ್ ತಲುಪಿದರು.
No comments:
Post a Comment